ಸುರತ್ಕಲ್: ಸುರತ್ಕಲ್ ಅಕ್ರಮ ಟೋಲ್ ಗೇಟನ್ನು ತೆರವು ಗೊಳಿಸುವಂತೆ ಒತ್ತಾಯಿಸಿ ಕಳೆದ 9 ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷ ಬಿ. ಎಂ ಫಾರೂಕ್ ಶನಿವಾರ ಭಾಗವಹಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಜನತಾದಳದ ರಾಜ್ಯ ಹಾಗೂ ಜಿಲ್ಲಾ ನಾಯಕರು, ಯುವ ಜನತಾದಳದ ರಾಜ್ಯ ಮುಖಂಡರಾದ ಫೈಝಲ್ ರೆಹಮಾನ್, ಜಿಲ್ಲಾ ಉಪಾಧ್ಯಕ್ಷರಾದ ಆಸಿಫ್ ತೋಡಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಶ್ ಬ್ಯಾರಿ, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಹಾ ಪ್ರಧಾನ ಕಾರ್ಯದರ್ಶಿ ಸುಮಿತ್ ಸುವರ್ಣ, ಜಿಲ್ಲಾ ವಿದ್ಯಾರ್ಥಿ ಜನತಾದಳದ ಅಧ್ಯಕ್ಷರಾದ ಬಿಲಾಲ್, ರಾಜ್ಯ ಕಾರ್ಯದರ್ಶಿ ತಮೀಮ್, ಝಿಯಾದ್, ಥಾಜ್ ಇನ್ನಿತರರು ಭಾಗವಹಿಸಿದ್ದರು.
ಕಳೆದ 9 ದಿನಗಳಿಂದ ನಡೆಯುತ್ತಿರುವ ಧರಣಿಯಲ್ಲಿ ನಾಡಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ರಾಜಕೀಯ ಮುಖಂಡರು ಭಾಗವಹಿಸಿ ಬೆಂಬಲ ಸೂಚಿಸುತ್ತಿದ್ದಾರೆ. ಟೋಲ್ ಗೇಟ್ ತೆರವುಗೊಳಿಸದೆ ಧರಣಿ ಕೈಬಿಡುವುದಿಲ್ಲ ಎಂದು ಹೋರಾಟ ಸಮಿತಿ ಈಗಾಗಲೇ ಎಚ್ಚರಿಕೆ ನೀಡಿದೆ.