ಪಟ್ನಾ: ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಹತ್ಯೆಗೀಡಾದವರನ್ನು ಬಿಜೆಪಿಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ, ತೆಲ್ಟಾ ಗ್ರಾಮದ ಸಂಜೀವ್ ಮಿಶ್ರಾ ಎಂದು ಗುರುತಿಸಲಾಗಿದೆ.
ತನ್ನ ಮನೆಯ ಹೊರಗೆ ಕುಳಿತಿದ್ದ ವೇಳೆ ಸಂಜೀವ್ ಮಿಶ್ರಾ ಅವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.
ಹಳೆ ದ್ವೇಷ ಹಾಗೂ ಆಸ್ತಿ ವಿವಾದವೇ ದಾಳಿಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.