ಭಾರತದ ಕಾನೂನು ಆಯೋಗದ ಅಧ್ಯಕ್ಷರಾಗಿ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇಮಕ

Prasthutha|

ನವದೆಹಲಿ: ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರನ್ನು ಸೋಮವಾರ ಕಾನೂನು ಆಯೋಗದ ಅಧ್ಯಕ್ಷರಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.

- Advertisement -

ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರನ್ನು ಭಾರತದ ಕಾನೂನು ಆಯೋಗದ ಅಧ್ಯಕ್ಷರನ್ನಾಗಿ ಮತ್ತು ನ್ಯಾಯಮೂರ್ತಿ ಕೆ.ಟಿ. ಶಂಕರನ್, ಪ್ರೊ. ಆನಂದ್ ಪಾಲಿವಾಲ್, ಪ್ರೊ. ಡಿ.ಪಿ. ವರ್ಮಾ, ಪ್ರೊ. ಡಾ. ರಾಕಾ ಆರ್ಯ ಮತ್ತು ಎಂ. ಕರುಣಾನಿಧಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ನ್ಯಾಯಮೂರ್ತಿ ರಿತುರಾಜ್ ಅವಸ್ಥಿಯವರು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದರು ಹಾಗೂ 2022ರ ಜುಲೈ 3ರಂದು ಕನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿವೃತ್ತರಾಗಿದ್ದರು. ಇವರು ಕರ್ನಾಟಕದಲ್ಲಿ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜಾಬ್ ಧರಿಸುವುದನ್ನು ನಿಷೇಧಿಸಿದ ಸರ್ಕಾರಿ ಕ್ರಮವನ್ನು ಎತ್ತಿಹಿಡಿದ ಹೈಕೋರ್ಟ್ ನ ಪೂರ್ಣಪೀಠದ ಅಧ್ಯಕ್ಷರಾಗಿದ್ದರು.

- Advertisement -

ಭಾರತದ 21ನೇ ಕಾನೂನು ಅಯೋಗದ ಅಧ್ಯಕ್ಷರಾಗಿದ್ದ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಎಸ್. ಚೌಹಾಣ್ ಅವರ ನಿವೃತ್ತಿಯ ಬಳಿಕ 2018ರ ಆಗಸ್ಟ್ 31ರಿಂದ ಖಾಲಿ ಉಳಿದಿತ್ತು. ಆಯೋಗ ರಚನೆಯಲ್ಲಿನ ವಿಳಂಬವನ್ನು ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.



Join Whatsapp