ಮಂಗಳೂರು: ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಇಂದು ಪ್ರಕಟಿಸುವ ನಿರೀಕ್ಷೆ ಇದೆ.
ಮಳಲಿ ಮಸೀದಿ ನವೀಕರಣದ ವೇಳೆ ಸಂಘಪರಿವಾರದ ಕಾರ್ಯಕರ್ತರು ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಎಂದು ವಿವಾದ ಎಬ್ಬಿಸಿದ್ದರು. ಈ ಹಿನ್ನೆಲೆ ಮಸೀದಿ ಸಮುಚ್ಚಯದ ಸರ್ವೇಕ್ಷಣೆಗೆ ಆದೇಶ ಮಾಡಬೇಕು ಎಂದು ಸಂಘಪರಿವಾರ ಮನವಿ ಮಾಡಿತ್ತು.
ಈ ಅರ್ಜಿಯು ವಕ್ಫ್ ಟ್ರಿಬ್ಯುನಲ್ ವ್ಯಾಪ್ತಿಗೆ ಬರಲಿದೆ ಎಂದು ಮಸೀದಿ ಆಡಳಿತ ಮಂಡಳಿ ಪರ ವಕೀಲರು ವಾದಿಸಿದ್ದರು. ಈ ಪ್ರಕರಣ ವಕ್ಫ್ ಟ್ರಿಬ್ಯುನಲ್ ನಲ್ಲಿ ನಡೆಯಬೇಕೋ ಅಥವಾ ಸಿವಿಲ್ ಕೋರ್ಟ್ ನಲ್ಲಿ ನಡೆಯಬೇಕೋ ಎಂಬ ಬಗ್ಗೆ ನ್ಯಾಯಾಲಯ ಇಂದು ತೀರ್ಪು ನೀಡುವ ಸಾಧ್ಯತೆ ಇದೆ.