ಮೇಲ್ಜಾತಿಗೆ 10% ಮೀಸಲಾತಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎಂಕೆ

Prasthutha|

ಚೆನ್ನೈ: ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (EWS) ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್’ನ ಐವರು ನ್ಯಾಯಾಧೀಶರ ಪೀಠದ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಪಕ್ಷ ನಿರ್ಧರಿಸಿದೆ.

- Advertisement -

ಡಿಎಂಕೆ ಪಕ್ಷವು EWS ಕೋಟಾವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್’ನ ಪೀಠದ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲು ನಿರ್ಧರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಮಿಳುನಾಡಿನ ಡಿಎಂಕೆ ಸರ್ಕಾರವು ಈ ಪ್ರಕರಣದ ಕಕ್ಷಿದಾರರಲ್ಲಿ ಒಂದಾಗಿತ್ತು ಮತ್ತು ಸರ್ಕಾರಿ ಉದ್ಯೋಗಗಳಿಗೆ EWS ಕೋಟಾವನ್ನು ನೀಡದಿರುವ ನಿರ್ಧಾರವನ್ನು ತೆಗೆದಿತ್ತು.

- Advertisement -

ಮೇಲ್ಜಾತಿಯವರಿಗೆ 10% ಎತ್ತಿಹಿಡಿದ ಸುಪ್ರೀಂ ಕೋರ್ಟ್’ನ ತೀರ್ಪಿನ ಕುರಿತ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಸುಪ್ರೀಂ ಕೋರ್ಟ್ ಆದೇಶವು ಶತಮಾನದ ಹಳೆಯ ಸಾಮಾಜಿಕ ನ್ಯಾಯದ ಹೋರಾಟಕ್ಕೆ ಹಿನ್ನಡೆಯಾಗಿದೆ ಎಂದು ತಿಳಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮದ ಕುರಿತು ಕಾನೂನು ತಜ್ಞರನ್ನು ಸಂಪರ್ಕಿಸುವುದಾಗಿ ಡಿಎಂಕೆ ಮುಖ್ಯಸ್ಥರಾದ ಸ್ಟಾಲಿನ್ ತಿಳಿಸಿದ್ದಾರೆ.

ಎಲ್ಲಾ ಸಮಾನ ಮನಸ್ಕ ಪಕ್ಷಗಳು EWS ಕೋಟಾ ಎಂಬ ಸಾಮಾಜಿಕ ಅನ್ಯಾಯದ ವಿರುದ್ಧ ಹೋರಾಡಲು ಮತ್ತು ಹೋರಾಟವನ್ನು ಮುಂದಕ್ಕೆ ಕೊಂಡೊಯ್ಯಲು ಒಗ್ಗೂಡುವಂತೆ ಅವರು ಮನವಿ ಮಾಡಿದ್ದಾರೆ.



Join Whatsapp