ಮಂಗಳೂರು: ಮಳಲಿ ಮಸೀದಿಗೆ ಸಂಬಂಧಿಸಿದ ತೀರ್ಪು ಪ್ರಕಟಗೊಂಡಿದ್ದು, ಈ ಸಂಬಂಧ ಮಳಲಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಎಸಿಪಿ ಮಟ್ಟದಲ್ಲಿ ಕೆಎಸ್ಆರ್ ಪಿ ಮತ್ತು ಸಿಎಆರ್ ಬಂದೋಬಸ್ತ್ ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರು ಮಳಲಿಗೆ ಭೇಟಿ ನೀಡಿ ಬಂದೋಬಸ್ತ್ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದರು.
ಮಳಲಿ ಮಸೀದಿಗೆ ಸಂಬಂಧಿಸಿದಂತೆ ವಿಶ್ವಹಿಂದೂ ಪರಿಷತ್ ನ ಅರ್ಜಿ ಸ್ವೀಕರಿಸಿರುವ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್, ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಅಲ್ಲದೆ ಜನವರಿ 8, 2023ಕ್ಕೆ ಮುಂದಿನ ವಿಚಾರಣೆ ನಡೆಸುವುದಾಗಿ ಹೇಳಿದೆ.