ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಜನವರಿ 5ರಂದು ಮತದಾರರ ಅಂತಿಮ ಪಟ್ಟಿ ಪ್ರಕಟ

Prasthutha|

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತಿದ್ದು, ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಮುಂದಿನ ತಿಂಗಳ ಡಿಸೆಂಬರ್ 8ರವರೆಗೂ ಕಾಲಾವಕಾಶವಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

- Advertisement -


ಬೆಂಗಳೂರಿನಲ್ಲಿಂದು ಸಂಯೋಜಿತ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆಗಾಗಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬರುವ ಜನವರಿ 5 ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.
2023ರ ಕರಡು ಮತದಾರರ ಪಟ್ಟಿ ಪ್ರಕಾರ, ರಾಜ್ಯದಲ್ಲಿ ಒಟ್ಟು 5 ಕೋಟಿ 09 ಲಕ್ಷದ 1 ಸಾವಿರದ 662 ಮತದಾರರಿದ್ದಾರೆ. ಇದರಲ್ಲಿ 2 ಕೋಟಿ 56 ಲಕ್ಷದ 39 ಸಾವಿರದ 736 ಪುರುಷ ಮತ್ತು 2 ಕೋಟಿ 52 ಲಕ್ಷದ 09 ಸಾವಿರದ 619 ಮಹಿಳಾ ಮತದಾರರು ಮತ್ತು 4 ಸಾವಿರದ 490 ಇತರೆ ಮತದಾರರಿದ್ದಾರೆ ಎಂದು ಅವರು ತಿಳಿಸಿದರು.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅತಿ ಹೆಚ್ಚು 6 ಲಕ್ಷದ 41 ಸಾವಿರದ 466 ಮತದಾರರನ್ನು ಹೊಂದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ಅತಿ ಕಡಿಮೆ 1 ಲಕ್ಷದ 65 ಸಾವಿರದ 485 ಮತದಾರರನ್ನು ಹೊಂದಿದೆ ಎಂದು ಚುನಾವಣಾಧಿಕಾರಿ ತಿಳಿಸಿದರು.


18 ವರ್ಷ ಪೂರ್ಣಗೊಳಿಸುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು, ಅರ್ಹ ಮತದಾರರು ತಮ್ಮ ಮೊಬೈಲ್ ಗಳಲ್ಲಿ Voter Helpine Mobile App ಮತ್ತು www.nvsp.in ಮೊಬೈಲ್ ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಮನೋಜ್ ಕುಮಾರ್ ಮೀನಾ ತಿಳಿಸಿದರು.



Join Whatsapp