ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಪ್ರದರ್ಶನ ಉದ್ಘಾಟನೆ

Prasthutha|

ಮಂಗಳೂರು: ಇಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನ. ಭಾರತೀಯ ನಾಗರಿಕರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 09ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನಾಗಿ ಆಚರಿಸಲಾಗುತ್ತಿದೆ.

- Advertisement -

 ಅದರ ಅಂಗವಾಗಿ ಮಂಗಳೂರು ನ್ಯಾಯಾಲಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಭಾವ ಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಾಯಿತು.

ಮಂಗಳೂರು ನ್ಯಾಯಾಲಯ ಸಂಕೀರ್ಣದ ಹಳೆ ಕೋರ್ಟ್ ಕಟ್ಟಡದಲ್ಲಿ ಆಯೋಜಿಸಲಾದ ಭಾವಚಿತ್ರ ಪ್ರದರ್ಶವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ ಉದ್ಘಾಟಿಸಿದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ ರೈ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ. ಶೋಭಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

ಸುಪ್ರೀಂ ಕೋರ್ಟ್ ಸೂಚನೆಯಂತೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೇಶಾದ್ಯಂತ ಅಕ್ಟೋಬರ್ 1ರಿಂದ ಅಕ್ಟೋಬರ್ 13ರ ವರೆಗೆ ಕಾನೂನು ಜಾಗೃತಿ ಮತ್ತು ಅರಿವು ಅಭಿಯಾನ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಕಡೆಗಳಲ್ಲಿ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರ ಭಾವ ಚಿತ್ರದ ಪ್ರದರ್ಶನ ವೀಕ್ಷಿಸಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಪ್ರಾಧಿಕಾರದ ಚಟುವಟಿಕೆಗಳನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಮಂಗಳೂರಿನ ವಿವಿಧ ನ್ಯಾಯಾಲಯಗಳ  ನ್ಯಾಯಾಧೀಶರು, ಪ್ಯಾನೆಲ್ ವಕೀಲರು, ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.



Join Whatsapp