ಸಿದ್ದರಾಮಯ್ಯ ವಿರುದ್ಧ ವೈಯಕ್ತಿಕ ಟೀಕೆ ಮಾಡಿಲ್ಲ; ಅಭಿಮಾನಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಪುಟ್ಟಸ್ವಾಮಿ

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುರುಬ ಜನಾಂಗದ ಫಲಾನುಭವಿಗಳಿಗೆ ತಲಾ ಇಪ್ಪತ್ತು ಕುರಿಗಳನ್ನು ಕೊಡುವ ಕುರಿತು ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ತಾವು ಯಾವುದೇ ವಿಚಾರ ವ್ಯಕ್ತಪಡಿಸಿಲ್ಲ. ಆದರೂ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಎಸ್.ಪುಟ್ಟಸ್ವಾಮಿ ಹೇಳಿದ್ದಾರೆ.

- Advertisement -

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಿದ್ದರಾಮಯ್ಯ ಅವರ ಬಗ್ಗೆ ನಾನು ವೈಯಕ್ತಿಕವಾಗಿ ಯಾವ ವಿಚಾರಗಳನ್ನು ಸಹ ಪ್ರಸ್ತಾಪಿಲ್ಲ. ನಮ್ಮ ಜನಾಂಗದ ಪ್ರಮುಖ ನಾಯಕರಾದ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ ಆತ್ಮ ತೃಪ್ತಿ ನನಗಿದೆ ಎಂದಿದ್ದಾರೆ.

ಹಾಗಾಗಿ ಈ ಪ್ರಕರಣದಲ್ಲಿ ಅನ್ಯಥಾ ನನ್ನ ಹೆಸರನ್ನು ಪ್ರಸ್ತಾಪಿಸಿರುವುದು ವೈಯಕ್ತಿಕವಾಗಿ ನನಗೆ ಬೇಸರವುಂಟು ಮಾಡಿದೆ. ಆದರೂ ಇದರಿಂದ ಜನಾಂಗದವರಿಗೆ ಬೇರೆ ರೀತಿಯಲ್ಲಿ ಸಂದೇಶ ಹೋಗಿದ್ದರೆ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಎಸ್.ಪುಟ್ಟಸ್ವಾಮಿ ಹೇಳಿದ್ದಾರೆ.



Join Whatsapp