ಜ್ಞಾನವಾಪಿ ಮಸೀದಿ ವಿವಾದ ಪ್ರಕರಣದ ಕುರಿತು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಇಂದು (ನವೆಂಬರ್ 11 ರಂದು)ವಿಚಾರಣೆ ನಡೆಸಲಿದೆ.
ಜ್ಞಾನವಾಪಿ ಮಸೀದಿ ಆವರಣದಲ್ಲಿ ಪೂಜೆಯ ಹಕ್ಕುಗಳನ್ನು ಕೋರಿ ಹಿಂದೂ ಭಕ್ತರು ಸಲ್ಲಿಸಿದ್ದ ದಾವೆಯನ್ನು ವಜಾಗೊಳಿಸುವ ಮಸೀದಿ ಸಮಿತಿಯ ಪ್ರಸ್ತಾಪವನ್ನು ಜಿಲ್ಲಾ ನ್ಯಾಯಾಲಯವು ತಿರಸ್ಕರಿಸಿದ ನಂತರ ಮೊದಲ ಬಾರಿಗೆ ಪ್ರಕರಣದ ವಿಚಾರಣೆ ನಡೆಯಲಿದೆ. ಜಿಲ್ಲಾ ನ್ಯಾಯಾಲಯದ ತೀರ್ಪಿಗಾಗಿ ಕಾಯಲು ಸುಪ್ರೀಂ ಕೋರ್ಟ್ ಈ ಹಿಂದೆ ಪ್ರಕರಣವನ್ನು ಜುಲೈನಲ್ಲಿ ಮುಂದೂಡಿತು.
ಹಿಂದೂ ಭಕ್ತರು ಸಲ್ಲಿಸಿದ ದಾವೆಯ ಆಧಾರದ ಮೇಲೆ ಮಸೀದಿಯ ಸಮೀಕ್ಷೆಗೆ ನಿರ್ದೇಶಿಸಿದ ವಾರಣಾಸಿ ಸಿವಿಲ್ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ವಾರಣಾಸಿಯ ಅಜ್ನುಮಾನ್ ಇಂಟೆಜಾಮಿಯಾ ಮಸೀದಿಯ ನಿರ್ವಹಣಾ ಸಮಿತಿಯು ಪ್ರಸ್ತುತ ಸುಪ್ರೀಂ ಕೋರ್ಟ್ನಲ್ಲಿ ಈ ಪ್ರಕರಣವನ್ನು ದಾಖಲಿಸಿದೆ.