ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಬಂದ ನಾಲ್ವರು ಪ್ರಯಾಣಿಕರು ತಮ್ಮ ಚೆಕ್-ಇನ್ ಟ್ರಾಲಿ ಚೀಲಗಳಲ್ಲಿ 2,01,37,150 ರೂ.ಗಳ ಮೌಲ್ಯದ ಒಟ್ಟು 3.895 ಕೆ.ಜಿ ತೂಕದ 24 ಕ್ಯಾರೆಟ್ ಶುದ್ಧತೆಯ ರೋಡಿಯಂ ಲೇಪಿತ ಚಿನ್ನದ ಪಟ್ಟಿಗಳನ್ನು ಮರೆಮಾಚಿ ಅಕ್ರಮವಾಗಿ ಸಾಗಿಸಲು ಪ್ರಯತ್ನಿಸಿದ್ದರು. ಇದನ್ನು ಪತ್ತೆ ಹಚ್ಚಿದ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡಿದ್ದು, ಪ್ರಯಾಣಿಕರನ್ನು ವಿಚಾರಣೆಗೊಳಪಡಿಸಲಾಗಿದೆ.