ನವದೆಹಲಿ: ಜ್ಞಾನವಾಪಿ ಮಸೀದಿಯನ್ನು ವಿವಾದವನ್ನಾಗಿ ಮಾಡಿದ ಪ್ರಕರಣದಲ್ಲಿ ಮೇ 17 ರಂದು ಹೊರಡಿಸಲಾದ ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಸ್ತರಿಸಿದೆ. ವಿಚಾರಣೆಯನ್ನು ನವೆಂಬರ್ 28 ಕ್ಕೆ ಮುಂದೂಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರನ್ನು ಒಳಗೊಂಡ ಪೀಠವು ಮಧ್ಯಂತರ ಆದೇಶವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿದೆ.
ಈ ಮೂಲಕ ವಾರಣಾಸಿ ಸಿವಿಲ್ ನ್ಯಾಯಾಲಯದ ಆದೇಶದ ಸಮಯದಲ್ಲಿ ಮಸೀದಿಯೊಳಗೆ ಶಿವಲಿಂಗ ಕಂಡುಬಂದಿದೆ ಎಂದು ವರದಿಯಾದ ಪ್ರದೇಶವನ್ನು ರಕ್ಷಿಸಲು ನಿರ್ದೇಶನಗಳನ್ನು ನೀಡಲಾಗಿದೆ.
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತ ಶಿವಲಿಂಗ ಎನ್ನಲಾದ ವಸ್ತುವನ್ನು ರಕ್ಷಿಸಬೇಕು ಎಂದು ಕೋರಿದ್ದ ಆದೇಶವನ್ನು ವಿಸ್ತರಿಸಬೇಕೆಂದು ಕೋರಿ ಮನವಿ ಸಲ್ಲಿಸಲಾಗಿತ್ತು.