ಚಿತ್ರದುರ್ಗ: ಮುರುಘಾ ಮಠದ ಸ್ವಾಮಿ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದ ಸಂತ್ರಸ್ತೆಯರ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಸ್ವಾಮಿಯ ವಿರುದ್ಧ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಿದ ಸಂತ್ರಸ್ತ ವಿದ್ಯಾರ್ಥಿನಿಯರಿಬ್ಬರ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದು ಮೈಸೂರಿನಿಂದ ಚಿತ್ರದುರ್ಗಕ್ಕೆ ಕರೆತಂದಿದ್ದಾರೆ. ಸ್ವಾಮಿಯ ವಿರುದ್ಧ ಹೇಳಿಕೆ ನೀಡುವಂತೆ ಮಠದ ಹಾಸ್ಟೆಲ್ನಲ್ಲಿ ವ್ಯಾಸಂಗ ಮಾಡಿದ್ದ ತನ್ನ ಮಕ್ಕಳಿಗೆ ಕುಮ್ಮಕ್ಕು ನೀಡಿದ ಆರೋಪ ಈ ಮಹಿಳೆಯ ಮೇಲಿದೆ ಎನ್ನಲಾಗಿದೆ.