ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮ: ಮಾಜಿ ಪ್ರಧಾನಿಗೆ ಕಾಟಾಚಾರದ ಕರೆ ಮಾಡಿದ ಬಿಜೆಪಿ; ಜೆಡಿಎಸ್ ಟೀಕೆ

Prasthutha|

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂಬ ಬಿಜೆಪಿಯ ಟ್ವೀಟಿಗೆ ಜೆಡಿಎಸ್ ಪಕ್ಷ ತಿರುಗೇಟು ನೀಡಿದೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ. ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ ! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ ಎಂದು ಪ್ರಶ್ನಿಸಿದೆ.

ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಶ್ರೀ ಹೆಚ್ ಡಿ ದೇವೇಗೌಡ ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ ಎಂದು ಬಿಜೆಪಿ ವಿರುದ್ಧ ಜೆಡಿಎಸ್ ಕಿಡಿಕಾರಿದೆ.



Join Whatsapp