ಮಂಗಳೂರಿನಲ್ಲಿ ತುಂತುರು ಮಳೆ ಸಾಧ್ಯತೆ: ನ.14 ರಂದು ಎಲ್ಲೋ ಅಲರ್ಟ್

Prasthutha|

ಮಂಗಳೂರು: ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ನ.14ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಶನಿವಾರ ಮುಂಜಾನೆ ಮಂಗಳೂರು ನಗರದಲ್ಲಿ ತುಂತುರು ಮಳೆಯಾಗಿದ್ದು, ಮೋಡ ಕವಿದ ವಾತಾವರಣವಿದೆ.

ನ. 14ರಂದು ಕರಾವಳಿಯ ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಹೀಗಾಗಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

- Advertisement -

ಅಲ್ಲದೆ, ಶನಿವಾರ ರಾಮನಗರ, ಮಂಡ್ಯ, ಮೈಸೂರು ಮತ್ತು ಕೊಡುಗು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ರವಿವಾರ ಮತ್ತು ಸೋಮವಾರ ಮಳೆಯ ಸಾಧ್ಯತೆ ಕಡಿಮೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.



Join Whatsapp