ಪ್ರಿಯಾಂಕ್ ಖರ್ಗೆ ಕೊಲೆಗೆ ಸಂಚು ರೂಪಿಸುತ್ತಿರುವ ಬಿಜೆಪಿ : ಕಾಂಗ್ರೆಸ್ ಮುಖಂಡನ ಗಂಭೀರ ಆರೋಪ

Prasthutha|

ಕಲಬುರಗಿ : ಕಾಂಗ್ರೆಸ್ ಮುಖಂಡ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಗ ಪ್ರಿಯಾಂಕ್ ಖರ್ಗೆ ಅವರನ್ನು ಕೊಲೆ ಮಾಡಲು ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಡಾ .ಶರಣ ಪ್ರಕಾಶ ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಬಿಟ್ ಕಾಯಿನ್ ಹಗರಣ, ಪಿಎಸ್‌ಐ ನೇಮಕಾತಿ ಅಕ್ರಮ ಹಾಗೂ ಹಲವಾರು ಬಿಜೆಪಿಯ ಹಗರಣಗಳ ವಿರುದ್ಧ ರಾಜಿರಹಿತವಾಗಿ ಶಾಸಕ ಪ್ರಿಯಾಂಕ್ ಖರ್ಗೆ ಧ್ವನಿ ಎತ್ತುತ್ತಿದ್ದಾರೆ. ಆ ಕಾರಣಕ್ಕೆ ಇವರನ್ನು ಕೊಲೆ ಮಾಡಲು ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ನಮಗೆ ಶೂಟ್ ಮಾಡಿದರೆ ತಮಗೂ ಶೂಟ್ ಮಾಡುವುದಾಗಿ ವಿವಾದತ್ಮಕ ಹೇಳಿಕ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರ ಹೇಳಿಕೆಯನ್ನು ಖಂಡಿಸಿ ಪತ್ರಿಕಾಗೋಷ್ಠಿಯೊಂದರಲ್ಲಿ ಈ ಬಗೆಯಲ್ಲಿ ಉತ್ತರಿಸಿದ್ದಾರೆ.

- Advertisement -

‘ಖರ್ಗೆ ಅವರನ್ನು ಶೂಟ್ ಮಾಡುವ ಬೆದರಿಕೆಯನ್ನು ಬಿಜೆಪಿ ಸರ್ಕಾರ ತಮ್ಮ ಮುಖಂಡರ ಮೂಲಕ ಹೇಳಿಕೆ ಕೊಡಿಸುತ್ತಿದೆ ಎಂದೂ ಕಿಡಿಕಾರಿದ್ದಾರೆ.

ಇದನ್ನೆಲ್ಲಾ ಗಮನವಹಿಸಿ ಸರಕಾರವು ಖರ್ಗೆ ಅವರಿಗೆ ಭದ್ರತೆ ಒದಗಿಸಬೇಕು. ಈ ಹಿಂದೆ ಹಲವು ಬಾರಿ ಹೇಳಿದರೂ ಸಮರ್ಪಕ ಭದ್ರತೆಯನ್ನು ನೀಡುವಲ್ಲಿ ಸರಕಾರ ವಿಫಲಗೊಂಡಿದೆ. ಜನಪ್ರತಿನಿಧಿಗಳಿಗೆ ಭದ್ರತೆ ನೀಡುವುದು ಸರಕಾರದ ಜವಾಬ್ದಾರಿ ಎಂದು ಅವರು ಹೇಳಿದ್ದಾರೆ.



Join Whatsapp