ಬೆಂಗಳೂರು: ಸರ್ಕಾರದಿಂದ ನಿಷೇಧಿಸಲ್ಪಟ್ಟ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತನೋರ್ವನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.
ಸಿ ಎಫ್ ಐ ಸದಸ್ಯ ಅಮೀರ್ ಹಮ್ಜಾ ಎಂಬಾತ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ. ಈತ ಸಿ ಎಫ್ ಐ ಯಲ್ಲಿ ಹೆಚ್ವಾಗಿ ಗುರುತಿಸಿ ಕೊಂಡಿದ್ದ. ಈತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ಪಶ್ಚಿಮ ಅಸ್ಸಾಂನ ಬಕ್ಸಾ ಜಿಲ್ಲೆಯ ಆನಂದ ನಗರ ಪ್ರದೇಶದ ನಿವಾಸಿ ಸಿ ಎಫ್ ಐ ಕಾರ್ಯಕರ್ತ ಎನ್ನಲಾದ ಹಮ್ಜಾ (27) ಎಂದು ಗುರುತಿಸಲಾಗಿದೆ.
ಅಸ್ಸಾಂ ಪೊಲೀಸರು ಬೆಂಗಳೂರು ಪೊಲೀಸರ ಸಹಾಯದಿಂದ ಈತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಎನ್ನಲಾಗಿದೆ.
ಬಂಧಿತ ವ್ಯಕ್ತಿಯನ್ನು ಸೋಮವಾರ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್, ಗುವಾಹಟಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಅಸ್ಸಾಂ ಪೊಲೀಸರ ವಿಶೇಷ ಕಾರ್ಯಾಚರಣೆ ಘಟಕವು ಹಮ್ಜಾ ವಿರುದ್ಧ ಯುಎಪಿಎ ಪ್ರಕರಣ ದಾಖಲಿಸಿದೆ.