ಚಾಮರಾಜನಗರ: ಉರುಳಿಗೆ ಸಿಲುಕಿ ಸಾವನ್ನಪ್ಪಿದ ಹೆಣ್ಣು ಹುಲಿಯ ಶವ , ಎಚ್.ಡಿ.ಕೋಟೆ ತಾಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯ ಅಂತರಸಂತೆ ವನ್ಯಜೀವಿ ವಲಯಕ್ಕೆ ಹೊಂದಿಕೊಂಡಂತಿರುವ ತಾರಕ ಸಮೀಪದ ಜಮೀನಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಜಮೀನಿನಲ್ಲಿ ಕಾಡು ಹಂದಿಗಾಗಿ ಹಾಕಿದ್ದ ಉರುಳಿಗೆ ಸಿಲುಕಿ ಸುಮಾರು 12-13 ವರ್ಷದ ಹೆಣ್ಣು ಹುಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಅಲ್ಲದೇ ಹುಲಿಗೆ ಮೂರು ಮರಿಗಳು ಸಹ ಇದ್ದು, ಸದ್ಯ ಮರಿಗಳ ರಕ್ಷಣೆಯ ದೃಷ್ಟಿಯಿಂದ ಅವುಗಳ ಹುಡುಕಾಟದಲ್ಲಿ ಅರಣ್ಯ ಇಲಾಖೆ ತೊಡಗಿದೆ.
ಈಗಾಗಲೇ ಕೊಂಬಿಂಗ್ ಕಾರ್ಯಚರಣೆ ಆರಂಭಿಸಿರುವ ಅರಣ್ಯ ಇಲಾಖೆ ಸುತ್ತಲು ಕ್ಯಾಮೆರಾ ಟ್ರಾಪ್ಗಳನ್ನು ಅಳವಡಿಸಿ ಹುಡುಕಾಟ ಆರಂಭಿಸಿದ್ದಾರೆ.