ಉಡುಪಿ: ವಿವಾಹಿತ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಹೆಣ್ಣು ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಹೂಡೆ ಎಂಬಲ್ಲಿ ನಡೆದಿದೆ.
ಹೂಡೆಯ ನಿವಾಸಿ ಉಸ್ತಾದ್ ಝುಬೈರ್ ಎಂಬವರ ಪತ್ನಿ ಅನ್ಸಿಯಾ (32) ಹಾಗೂ ಅವರ ಒಂದು ವರ್ಷದ ಹೆಣ್ಣು ಮಗು ಅಜೀನ್ ನಾಪತ್ತೆಯಾದವರು ಎಂದು ಗುರುತಿಸಲಾಗಿದೆ.
ಆನ್ಸಿಯಾ ನ.7ರಂದು ತನ್ನ ಮಗುವಿನೊಂದಿಗೆ ಬೆಳಗ್ಗೆ 10 ಗಂಟೆಗೆ ತಾನು ಕೆಲಸ ಮಾಡುತ್ತಿರುವ ಹೈರಿಚ್ ಕಚೇರಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು ಸಂಜೆ 5 ಗಂಟೆಯಾದರೂ ಮನೆಗೆ ಹಿಂದಿರುಗಿರಲಿಲ್ಲ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಯಿ ಮತ್ತು ಮಗವಿನ ಬಗ್ಗೆ ಮಾಹಿತಿ ಸಿಕ್ಕಿದರೆ ದೂರವಾಣಿ ಸಂಖ್ಯೆ 0820-2537999 ಅಥವಾ ಮೊಬೈಲ್ ಸಂಖ್ಯೆ 94808 05447 ಅನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.