ಹಾಲಿನ ದರ ಪರಿಷ್ಕರಣೆ: ನ.20 ರ ನಂತರ ತೀರ್ಮಾನ – ಸಿಎಂ ಬೊಮ್ಮಾಯಿ

Prasthutha|

ಕಲಬುರಗಿ (ಸೇಡಂ) ನವೆಂಬರ್ 14: ಹಾಲಿನ ದರ ಏರಿಕೆ ಬಗ್ಗೆ ಈ ತಿಂಗಳ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.

- Advertisement -

ಅವರು ಇಂದು ಸೇಡಂನಲ್ಲಿ ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮವರಿಗೆ ಪ್ರತಿಕ್ರಿಯಿಸುತ್ತಾ, ಕಳೆದ ಹಲವಾರು ತಿಂಗಳಿನಿಂದ ಚರ್ಚೆಯಾಗುತ್ತಿದ್ದು, ಈ ತಿಂಗಳ 20ನೇ ತಾರೀಖಿನ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.



Join Whatsapp