ಚಾಕು ಇರಿದು ಬಿಜೆಪಿ ಮುಖಂಡನ ಬರ್ಬರ ಹತ್ಯೆ

Prasthutha|

ಕಲಬುರಗಿ: ಚಾಕು ಇರಿದು ಬಿಜೆಪಿ ಮುಖಂಡನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನಡೆದಿದೆ.

- Advertisement -


ಮಲ್ಲಿಕಾರ್ಜುನ್ ಮುತ್ಯಾಲ (64) ಮೃತ ಬಿಜೆಪಿ ನಾಯಕ ಎಂದು ಗುರುತಿಸಲಾಗಿದೆ.


ಕೋಲಿ ಕಬ್ಬಲಿಗ ಸಮಾಜದ ತಾಲೂಕು ಘಟಕದ ಮುಖಂಡರಾಗಿದ್ದ ಮಲ್ಲಿಕಾರ್ಜುನ್, ಸೇಡಂ ಪಟ್ಟಣದಲ್ಲಿ ವಿಷ್ಣು ಎಂಬ ಹೆಸರಿನ ಎಲೆಕ್ಟ್ರಾನಿಕ್ ಅಂಗಡಿ ಹೊಂದಿದ್ದರು. ರಾತ್ರಿ ಅಂಗಡಿಯಲ್ಲಿಯೇ ಮಲಗುತ್ತಿದ್ದಾಗ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಚಾಕು ಇರಿದು ಕೊಲೆಗೈದು ಪರಾರಿಯಾಗಿದ್ದಾರೆ.
ಈ ಬಗ್ಗೆ ಸೇಡಂ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.



Join Whatsapp