ಟಿಎಂಸಿ ನಾಯಕನ ಕಾರಿಗೆ ಡಿಕ್ಕಿ ಹೊಡೆದು ಮಗು ಸಾವು: ತನಿಖೆಗೆ ಬಿಜೆಪಿ ಆಗ್ರಹ

Prasthutha|

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ನಾಯಕ ಅಬು ತಾಹೇರ್ ಖಾನ್ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನೌಡಾ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರಖಾಲಿ ಪ್ರದೇಶದಲ್ಲಿ ನಡೆದಿದೆ.

- Advertisement -

ಬುಧವಾರ ಮದ್ಯಾಹ್ನ ಈ ಘಟನೆ ನಡೆದಿದ್ದು, ತಕ್ಷಣವೇ ಮಗುವನ್ನು ಅದೇ ಕಾರಿನಲ್ಲಿ ಆಸ್ಪತ್ರಗೆ ಸಾಗಿಸಲಾದರೂ ಮಗು ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ ನಾಯಕ, ಮಗು ರಸ್ತೆಯಲ್ಲಿ ಆಚೀಚೆ ಓಡುತ್ತಿದ್ದರೂ ಮಗುವಿನ ತಾಯಿ ಅವನ ಮೇಲೆ ನಿಗಾ ಇಡಲಿಲ್ಲ, ಇದರಿಂದಾಗಿ ಅಪಘಾತ ಸಂಭವಿಸಿದೆ ಎಂದು ಆರೋಪಿಸಿದ್ದಾರೆ.

- Advertisement -

ಈ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದೆ.



Join Whatsapp