ವೇದಿಕೆಯಲ್ಲಿ ಅಸ್ವಸ್ಥರಾದ ಕೇಂದ್ರ ಸಚಿವ ನಿತಿನ್ ಗಡ್ಕರಿ

Prasthutha|

ಸಿಲಿಗುರಿ: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ವೇದಿಕೆಯ ಮೇಲೆಯೇ ಹಠಾತ್ ಅಸ್ವಸ್ಥಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಗುರುವಾರ ನಡೆದಿದೆ.

- Advertisement -


ವೈದ್ಯರು ತಕ್ಷಣವೇ ನಿತಿನ್ ಗಡ್ಕರಿ ಅವರನ್ನು ತಪಾಸಣೆ ನಡೆಸಿದ್ದಾರೆ.


ಸಿಲಿಗುರಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಸೇರಿದಂತೆ 1,206 ಕೋಟಿ ರೂಪಾಯಿ ವೆಚ್ಚದ ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ನಿತಿನ್ ಗಡ್ಕರಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲೇ ನಿತಿನ್ ಗಡ್ಕರಿ ಏಕಾಏಕಿ ಅಸ್ವಸ್ಥರಾದರು. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಅನಾರೋಗ್ಯದ ಸುದ್ದಿ ಕೇಳಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.



Join Whatsapp