ಬಾಬಾ ಬುಡನ್’ಗಿರಿ ವಿಚಾರದಲ್ಲಿ ಬಿಜೆಪಿ ಸರ್ಕಾರದ ನಡೆಯನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಲಿ: SDPI

Prasthutha|

ಚಿಕ್ಕಮಗಳೂರು: ಸರ್ವಧರ್ಮ ಸಮನ್ವಯದ ಕೇಂದ್ರವಾಗಿರುವ ಬಾಬಾ ಬುಡನ್’ಗಿರಿ ವಿಚಾರದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ನಡೆಯನ್ನು ನ್ಯಾಯಲಯ ಗಂಭೀರವಾಗಿ ಪರಿಗಣಿಸಬೇಕೆಂದು ಎಸ್.ಡಿ.ಪಿ.ಐ. ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರ ಸರ್ವಧರ್ಮ ಸಮನ್ವಯ ಕೇಂದ್ರವಾಗಿರುವ ಬಾಬಾಬುಡನ್ ದರ್ಗಾ ವ್ಯವಸ್ಥಾಪನಾ ಸಮಿತಿ ರಚನೆಯಲ್ಲಿ “ಎರಡೂ ಧರ್ಮದವರನ್ನೊಳಗೊಂಡ ಸಮಿತಿ ರಚಿಸಲಾಗುವುದು”ಎಂದು ಕೋರ್ಟಿಗೆ ಮುಚ್ಚಳಿಕೆ ಬರೆದುಕೊಟ್ಟಿತ್ತು. ಈಗ ಸಂಘಪರಿವಾರದ ಆಜ್ಞೆಯಂತೆ ಸಮಿತಿಯಲ್ಲಿ ಕೇವಲ ನೆಪಮಾತ್ರಕ್ಕೆ ಒಬ್ಬ ಮುಸ್ಲಿಂ ಸದಸ್ಯನನ್ನು ನೇಮಕ ಮಾಡಿ ಕೋರ್ಟ್‌ಗೆ ಮುಚ್ಚಳಿಕೆ ಸಲ್ಲಿಸಲಿದೆ ಎಂದು ಟೀಕಿಸಿದ್ದಾರೆ.

ಬಾಬಾ ಬುಡನ್’ಗಿರಿಗೆ ವಿರುದ್ಧವಾಗಿ ನಡೆದುಕೊಂಡು ನ್ಯಾಯಾಲಯದ ದಾರಿ ತಪ್ಪಿಸುತ್ತಿರುವ ಬಿಜೆಪಿ ಸರ್ಕಾರದ ನಡೆಯನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಲಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ಆಗ್ರಹಿಸುತ್ತೇನೆ. 1999 ರಲ್ಲಿ ಅಂದಿನ ಜಿಲ್ಲಾಧಿಕಾರಿ ಎರಡು ಧರ್ಮಗಳಿಗೆ ಸೇರಿದ ತಲಾ 8 ಜನರ ಸಮಿತಿ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲಾಗಿದ್ದನ್ನು ಸ್ಮರಿಸಿಕೊಳ್ಳಬಹುದು ಎಂದು ತಿಳಿಸಿದರು.




Join Whatsapp