ಸಾಮೂಹಿಕ ಅತ್ಯಾಚಾರ| BSF ಸಿಬ್ಬಂದಿ ಸೇರಿ ಐವರ ಬಂಧನ

Prasthutha|

ಜೈಪುರ: 35 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಿಎಸ್‌ಎಫ್‌ನ ಮೂವರು ಸಿಬ್ಬಂದಿ ಸೇರಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

- Advertisement -

 ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ. ಆಕೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ.

ಮಹಿಳೆಯು ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆ ನೀಡಿದ ನಂತರ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಪೈಕಿ ಬಿಎಸ್‌ಎಫ್‌ನ ಒಬ್ಬ ಹೆಡ್‌ ಕಾನ್‌ಸ್ಟೆಬಲ್‌, ಇಬ್ಬರು ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ ಎಂದು ವರದಿಯಾಗಿದೆ.

- Advertisement -



Join Whatsapp