ನಾಳೆ ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ: ಅಧಿಕಾರಿಗಳೊಂದಿಗೆ ಸಭೆ

Prasthutha|

ಶಿವಮೊಗ್ಗ: ಆಟೋ ರಿಕ್ಷಾ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ನಾಳೆ ಕರಾವಳಿ ನಗರ ಮಂಗಳೂರು ನಗರಕ್ಕೆ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

- Advertisement -

ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಅವರನ್ನೊಳಗೊಂಡ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದು, ಘಟನೆಯ ಸಂಬಂಧ ಚರ್ಚಿ ನಡೆಯಲಿದೆ.

ಮಂಗಳೂರು ಭೇಟಿ ಸಂದರ್ಭದಲ್ಲಿ ಸಚಿವರು, ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.

- Advertisement -

ಈ ಬಗ್ಗೆ ಇಂದು ಮಾತನಾಡಿದ ಸಚಿವರು, ಮಂಗಳೂರು ಆಟೋ ರಿಕ್ಷಾ ಸ್ಫೋಟ ಘಟನೆಯನ್ನು ರಾಜ್ಯ ಪೊಲೀಸರು, ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಭಯೋತ್ಪಾದನೆ ಚಟುವಟಿಕೆಗಳನ್ನು ಸಮಗ್ರ ತನಿಖೆ ಮಾಡಿ, ವಿದ್ರೋಹಿಗಳನ್ನು ಮಟ್ಟ ಹಾಕಲು ರಾಜ್ಯ ಪೊಲೀಸರು ಕೇಂದ್ರ ತನಿಖಾ ಸಂಸ್ಥೆಗಳ ಸಹಯೋಗದೊಂದಿಗೆ ಶ್ರಮಿಸುತ್ತಿದ್ದಾರೆ ಎಂದರು.

ಸ್ಫೋಟಕವನ್ನು ತಯಾರಿಸಿ ಭಯೋತ್ಪಾದನೆ ಕೃತ್ಯ ನಡೆಸಲು ತೆರಳುತ್ತಿದ್ದ ಹಾಗೂ ಸುಟ್ಟ ಗಾಯಗಳಿಂದ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಗ್ರ ಶಾರೀಕ್’ನಿಂದ ಇನ್ನೂ ಹೆಚ್ಚಿನ ಮಾಹಿತಿ ಹೊರ ಬರಬೇಕಿದೆ ಎಂದಿದ್ದಾರೆ.

ಇದುವರೆಗಿನ ಮಾಹಿತಿ ಆಧಾರದಿಂದ ರಾಜ್ಯ ಪೊಲೀಸರು, ಉಗ್ರ ಚಟುವಟಕೆಗಳಿಗೆ ಸ್ನೇಹಹಸ್ತ ಚಾಚಿದವರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ ಎಂದೂ ತಿಳಿಸಿದ್ದಾರೆ.



Join Whatsapp