ಮತದಾರರ ಚೀಟಿ ಅಕ್ರಮ: ಬೆಂಗಳೂರಿಗೆ ಬಂದ ಚುನಾವಣಾ ಆಯೋಗದ ತಂಡ

Prasthutha|

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ಲಕ್ಷಾಂತರ ಮಂದಿಯ ಹೆಸರನ್ನು ಕೈಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ತಂಡ ನಗರಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಚುನಾವಣಾ ಅಕ್ರಮ ವಿವಾದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರತಿಪಕ್ಷ ಸೇರಿದಂತೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಸಂಬಂಧ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗದೊಂದಿಗೆ ಮಹತ್ವದ ಸಭೆ ನಡೆಯಲಿದ್ದು, ಈ ಬಗ್ಗೆ ಮಾಹಿತಿ ಕಲೆಹಾಕಲಿದೆ ಎಂದು ತಿಳಿದುಬಂದಿದೆ.



Join Whatsapp