ನವದೆಹಲಿ: ಜೈಲಿನಲ್ಲಿರುವ ದೆಹಲಿ ಸಚಿವ ಸತ್ಯೇಂದರ್ ಜೈನ್ ತಿಹಾರ್ ಜೈಲಿನೊಳಗೆ ಭೂರಿ ಭೋಜನ ಸೇವಿಸುತ್ತಿರುವ ಹೊಸ ವೀಡಿಯೊವೊಂದು ವೈರಲ್ ಆಗಿದೆ.
ಜೈಲಿನಲ್ಲಿರುವ ಸಚಿವ ಸತ್ಯೇಂದರ್ ಜೈನ್ ಅವರು ಅಸಮರ್ಪಕ ಆಹಾರದ ಬಗ್ಗೆ ನ್ಯಾಯಾಲಯದಲ್ಲಿ ದೂರು ನೀಡಿದ ಒಂದು ದಿನದ ನಂತರ ಈ ವೀಡಿಯೋ ಬಂದಿದೆ. ವೀಡಿಯೋದಲ್ಲಿ ಜೈನ್ ಜೈಲಿನಲ್ಲಿ ಉತ್ತಮ ಆಹಾರವನ್ನು ಪಡೆಯುತ್ತಿರುವುದನ್ನು ಕಾಣಬಹುದು.
ಸತ್ಯೇಂದರ್ ಜೈನ್ ಜೈಲಿನಲ್ಲಿದ್ದಾಗ 8 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರೆ ಎಂದು ತಿಹಾರ್ ಜೈಲಿನ ಮೂಲಗಳು ತಿಳಿಸಿವೆ.
ತಿಹಾರ್ ಜೈಲಿನಲ್ಲಿ ಸರಿಯಾದ ಆಹಾರ ಮತ್ತು ವೈದ್ಯಕೀಯ ತಪಾಸಣೆಯಂತಹ ಸವಲತ್ತುಗಳು ಸಿಗುತ್ತಿಲ್ಲ ಎಂದು ಜೈನ್ ಮಂಗಳವಾರ ವಿಚಾರಣಾ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ದೂರಿನಲ್ಲಿ ಜೈನ್ 28 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ಅವರ ವಕೀಲರು ಆರೋಪಿಸಿದ್ದರು.