ಮಂಗಳೂರು ಆಟೋ ಸ್ಫೋಟ ಪ್ರಕರಣ: ಸ್ಥಳಕ್ಕೆ ಗೃಹಸಚಿವ ಭೇಟಿ

Prasthutha|

ಮಂಗಳೂರು: ನಾಗುರಿಯಲ್ಲಿ ನಡೆದ ಆಟೋ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಡಿಜಿಪಿ ಪ್ರವೀಣ್ ಸೂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

ಅವರಿಗೆ ಪಶ್ಚಿಮ ವಲಯ ಐಜಿಪಿ ಡಾ.ಚಂದ್ರಗುಪ್ತ, ಮಂಗಳೂರು ನಗರ ಡಿಸಿಪಿ ಅಂಶ್ಯು ಕುಮಾರ್ ಸಾಥ್ ನೀಡಿದರು.

ಇದೇ ವೇಳೆ ಸ್ಫೋಟದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಘಟನೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆಗೆ ಗೃಹ ಸಚಿವರು ಸಭೆ ನಡೆಸಲಿದ್ದಾರೆ  ಎಂದು ತಿಳಿದು ಬಂದಿದೆ.



Join Whatsapp