ಕುಖ್ಯಾತ ರೌಡಿಗಳ ಮನೆ ಮೇಲೆ ಸಿಸಿಬಿ ಪೊಲೀಸ್ ದಾಳಿ; ಹಲವರು ವಶಕ್ಕೆ

Prasthutha|

ಬೆಂಗಳೂರು: ನಗರದ ಕುಖ್ಯಾತ ರೌಡಿಗಳ ಮನೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 25 ಮಂದಿ ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ.

- Advertisement -


ಅಪರಾಧ ಚಟುವಟಿಕೆ ನಡೆಸುತ್ತಿದ್ದ ಗಂಭೀರ ಆರೋಪದಡಿ ಐವರು ಎಸಿಪಿ ನೇತೃತ್ವದ ಪೊಲೀಸರ ತಂಡ 86 ಕ್ಕೂ ಹೆಚ್ಚು ಮನೆಗಳ ಮೇಲೆ ದಾಳಿ ನಡೆಸಿದ್ದು, ಕೆಲ ರೌಡಿಗಳು ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ.


ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ್, ಬೇಕರಿ ರಘು ಹಾಗು ಒಂಟೆ ರೋಹಿತ್ ಸಹಿತ ಹಲವು ರೌಡಿಗಳ ಮನೆಗಳ ಮೇಲೆ ದಾಳಿ ನಡೆದಿದೆ. ಕೋತಿರಾಮ, ಟಾಮಿ, ವಿಜಯನಗರದ ರೌಡಿಶೀಟರ್ ರಾಘವೇಂದ್ರ ಪ್ರಸಾದ್ ಸೇರಿ ಹಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.‌ ರಾಘವೇಂದ್ರ ಎಂಬಾತನ ಮನೆಯಲ್ಲಿ ಎರಡು ತಲವಾರು ಪತ್ತೆಯಾಗಿದ್ದು ಪೊಲೀಸರು ವಶಪಡಿಸಿಕೊಂಡಿದ್ದಾರೆ.



Join Whatsapp