ನವದೆಹಲಿ: ಸುಪ್ರೀಂ ಕೋರ್ಟ್ ಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿಗಳನ್ನು ಸಲ್ಲಿಸಲು ಆನ್’ಲೈನ್ ಪೋರ್ಟಲ್ ಕಾರ್ಯನಿರ್ವಹಿಸಲು ಸಿದ್ಧವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಗುರುವಾರ ಘೋಷಿಸಿದ್ದಾರೆ.
ಗುರುವಾರ ಬೆಳಿಗ್ಗೆ ಕಲಾಪ ಪ್ರಾರಂಭಿಸಿದ ನಂತರ ಮಾತನಾಡಿದ ಸಿಜೆಐ, ಆರ್ ಟಿಐ ಪೋರ್ಟಲ್ ಸಿದ್ಧವಾಗಿದೆ. ಇದು 15 ನಿಮಿಷಗಳಲ್ಲಿ ಕೆಲಸ ಮಾಡಲು ಪ್ರಾರಂಭಿಸುತ್ತದೆ. ಇದರ ಕುರಿತು ಏನಾದರೂ ಸಮಸ್ಯೆಗಳಿದ್ದರೆ ನನ್ನನ್ನು ಸಂಪರ್ಕಿಸಿ. ಅದನ್ನು ಪರಿಶೀಲಿಸಲು ನಾನು ಹೆಚ್ಚು ಸಂತೋಷಪಡುತ್ತೇನೆ ಎಂದು ಹೇಳಿದ್ದಾರೆ.
ಆರ್ ಟಿಐ ಪೋರ್ಟಲ್ ನ ಪರೀಕ್ಷಾ ಲಿಂಕ್ ಅನ್ನು ಎರಡು ದಿನಗಳ ಹಿಂದೆ ಪ್ರಾರಂಭಿಸಲಾಯಿತು.
ಕಳೆದ ವಾರ, ಆನ್ ಲೈನ್ ಆರ್ ಟಿಐ ಪೋರ್ಟಲ್ ಅನ್ನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ, ಸಿಜೆಐ ಇದನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಹೇಳಿದ್ದರು.