ನವದೆಹಲಿ: ಪ್ರವಾದಿ ಮುಹಮ್ಮದ್ ವಿರುದ್ಧ ನೂಪುರ್ ಶರ್ಮಾ ಅವರು ನೀಡಿದ ಅವಹೇಳನಕಾರಿ ಹೇಳಿಕೆಯನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಪೊಲೀಸರು ಮುಸ್ಲಿಮ್ ಯುವಕ ಸುಹೈಲ್ ಎಂಬಾತನನ್ನು ಬಂಧಿಸಿದ್ದು, ಸುಪ್ರೀಂ ಕೋರ್ಟ್ ಆತನಿಗೆ ಜಾಮೀನು ನೀಡಿದೆ.
ಸುಹೈಲ್ಗೆ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಪಮಿಡಿಘಂಟಂ ಶ್ರೀ ನರಸಿಂಹ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಆರೋಪಿ ಸುಹೈಲ್ 20 ವರ್ಷದವನಾಗಿದ್ದು, ಕಳೆದ 3 ವರ್ಷ 4 ತಿಂಗಳಿನಿಂದ ವಿಚಾರಣಾಧೀನ ಖೈದಿಯಾಗಿ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಆತನೊಬ್ಬನೇ ಕುಟುಂಬಕ್ಕೆ ಆಸರೆಯಾಗಿದ್ದನು ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.