ಬಿಎಲ್ ಸಂತೋಷ್‌ಗೆ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆಯಾಜ್ಞೆ!

Prasthutha|

ನವದೆಹಲಿ: ಟಿಆರ್ಎಸ್ ಶಾಸಕರನ್ನು ಖರೀದಿಸಲು ಪ್ರಯತ್ನಿಸಿದ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಸಿಆರ್ಪಿಸಿಯ ಸೆಕ್ಷನ್ 41 ಎ ಅಡಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಡಿಸೆಂಬರ್ 5 ರವರೆಗೆ ನೀಡಿದ್ದ ನೋಟಿಸ್ ಗೆ ತೆಲಂಗಾಣ ಹೈಕೋರ್ಟ್ ತಡೆ ನೀಡಿದೆ.

- Advertisement -

ನವೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಈ ಹಿಂದೆ ಸಂತೋಷ್ ಮತ್ತು ಇತರರಿಗೆ ನೋಟಿಸ್ ನೀಡಿತ್ತು. ಆದರೆ, ಅವರು ಹಾಜರಾಗಲಿಲ್ಲ. ಆದ್ದರಿಂದ, ನ್ಯಾಯಾಲಯದ ನಿರ್ದೇಶನದ ಆಧಾರದ ಮೇಲೆ, ಎಸ್ಐಟಿ ನವೆಂಬರ್ 26 ಅಥವಾ 28 ರಂದು ತನ್ನ ಮುಂದೆ ಹಾಜರಾಗುವಂತೆ ಸಂತೋಷ್ ಗೆ ಮತ್ತೆ ನೋಟಿಸ್ ನೀಡಿದೆ.

ನೋಟಿಸ್ ರದ್ದುಗೊಳಿಸುವಂತೆ ಕೋರಿ ಬಿಜೆಪಿ ನಾಯಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಡಿಸೆಂಬರ್ 5ರೊಳಗೆ ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಪ್ರಕರಣದಲ್ಲಿ ಸಂತೋಷ್ ಮತ್ತು ಕೇರಳದ ಇಬ್ಬರು ವ್ಯಕ್ತಿಗಳಾದ ಜಗ್ಗು ಸ್ವಾಮಿ ಮತ್ತು ತುಷಾರ್ ವೆಲ್ಲಪಲ್ಲಿ ಅವರನ್ನು ಎಸ್ಐಟಿ ಆರೋಪಿಗಳನ್ನಾಗಿ ಹೆಸರಿಸಿದೆ.



Join Whatsapp