ಗಡಿ ವಿವಾದ| ಮಹಾರಾಷ್ಟ್ರ ಮುಖ್ಯಮಂತ್ರಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಕರವೇ

Prasthutha|

ಬೆಳಗಾವಿ : ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಹರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಕರ್ನಾಟಕ – ಮಹಾರಾಷ್ಟ್ರ ಗಡಿವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಸರ್ಕಾರಿ ಬಸ್ಸುಗಳಿಗೆ ಮಸಿ ಮತ್ತು ಕಲ್ಲು ತೂರಾಟ ಮಾಡಿರುವ ಹಿನ್ನಲೆಯಲ್ಲಿ ಕರವೇ ಕಾರ್ಯಕರ್ತರು ಮಹರಾಷ್ಟ್ರದ ವಾಹನಗಳಿಗೆ ಮಸಿ ಬಳಿಯುವುದರ ಜೊತೆಗೆ ಏಕನಾಥ ಶಿಂಧೆ ಅವರ ಪ್ರತಿಕೃತಿಯನ್ನು ದಹನ ಮಾಡಿದ್ದಾರೆ.

ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಯ ಹಲವು ಬಸ್‌ಗಳಿಗೆ ಅಖಿಲ ಮಹಾರಾಷ್ಟ್ರ ಮರಾಠಿಗರ ಸಂಘದ ಕಾರ್ಯಕರ್ತರು ಶುಕ್ರವಾರ ಕಪ್ಪು ಮಸಿ ಬಳಿದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಅಷ್ಟಲ್ಲದೆ, ಬೆಳಗಾವಿ, ನಿಪ್ಪಾಣಿ, ಖಾನಾಪುರ, ಬಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಪ್ರತಿಭಟನೆ ನಡೆಸಿದ್ದರು.

- Advertisement -

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ್‌ ಗುಡಗನಟ್ಟಿ, ಮಹಾರಾಷ್ಟ್ರಿಗರ ಪುಂಡಾಟದಿಂದ ನಮಗೆಲ್ಲ ಬೇಸರವಾಗಿದ್ದು, ಈ ಹಿನ್ನೆಲೆಯಲ್ಲಿ ಕರವೇ ವತಿಯಿಂದ ಮಹಾರಾಷ್ಟ್ರದ ಮುಖ್ಯಮಂತ್ರಿಯವರ ಪ್ರತಿಕೃತಿಯನ್ನು ದಹನ ಮಾಡುವುದರ ಮುಖಾಂತರ ನಮ್ಮ ಹೋರಾಟವನ್ನು ಮುಂದುವರೆಸಿ, ಜಿಲ್ಲೆಯ ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದರು.



Join Whatsapp