ನವದೆಹಲಿ: ಮುಂಬರುವ 2024ರ ಲೋಕಸಭಾ ಚುನಾವಣೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತ್ ಜೋಡೋ ಯಾತ್ರೆಯನ್ನು ಕೊನೆಗೊಳಿಸಲು ಕಾಂಗ್ರೆಸ್ ವಿಶೇಷ ದಿನವನ್ನು ಆಯ್ಕೆ ಮಾಡಿದೆ.
ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾದ ಭಾರತ್ ಜೋಡೋ ಪಾದಯಾತ್ರೆಯು ಕಾಶ್ಮೀರದಲ್ಲಿ ಸುಮಾರು 3500 ಕಿ.ಮೀ ದೂರವನ್ನು ಕ್ರಮಿಸಿ ಜನವರಿ 26 ರಂದು ಕೊನೆಗೊಳಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 20 ರಂದು ಶ್ರೀನಗರದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಕಾಂಗ್ರೆಸ್ ಈ ಯಾತ್ರೆಯನ್ನು ಕೊನೆಗೊಳಿಸಲು ತೀರಮಾನಿಸಿತ್ತು. ಆದರೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ರಾಹುಲ್ ಗಾಂಧಿ ಗಣರಾಜ್ಯೋತ್ಸವದಂದು ಶ್ರೀನಗರದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ತಮ್ಮ ಯಾತ್ರೆಯನ್ನು ಮುಕ್ತಾಯಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಲ್ಲದೆ ಜನವರಿ 26 ರ ನಂತರ, ಫೆಬ್ರವರಿ 7 ರೊಳಗೆ ಕಾಂಗ್ರೆಸ್ ನ ಪೂರ್ಣ ಅಧಿವೇಶನ ನಡೆಯಲಿದ್ದು, ಇದರಲ್ಲಿ ಹೊಸ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿದು ಬಂದಿದೆ.