ನವದೆಹಲಿ: ಡಿಸೆಂಬರ್ 7ರಿಂದ ಪ್ರಾರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿ ಹಾಕುವ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ನ ಪ್ರಮುಖ ಮುಂಖಡರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಲಿದ್ದಾರೆ.
ಖರ್ಗೆ ಪಕ್ಷದ ರಾಷ್ಟ್ರಾಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದ್ದು, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಿಂದ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ, ರಾಜ್ಯಸಭೆಯಿಂದ ಪಕ್ಷದ ಮುಖಂಡ ಜೈರಾಂ ರಮೇಶ್, ಕೆ.ಸುರೇಶ್ ಸೇರಿದಂತೆ ಹಲವು ಪ್ರಮುಖ ನಾಯಕರು ಇಂದು ಸಂಜೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸಭೆ ನಡೆಸಲಿದ್ದಾರೆ.
ಮಾಜಿ ಸಚಿವ ಪಿ.ಚಿದಂಬರಂ, ಮನೀಶ್ ತಿವಾರಿ ಕೂಡ ಸೋನಿಯಾ ಗಾಂಧಿ ಅವರ 10ನೇ ಜನಪತ್ ನಿವಾಸದಲ್ಲಿನ ಸಭೆಯಲ್ಲಿ ಭಾಗಿಯಾಗಿ ಪಕ್ಷದ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ.