ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ ಪೂರ್ವಭಾಗದ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಭಾಗದ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಕಳೆದ ಎಂಟು ಹತ್ತು ದಿನಗಳಿಂದ ಮಳೆ ಬಿಡುವು ಕೊಟ್ಟಿದ್ದು, ಒಣ ಹವೆ ಮುಂದುವರೆದಿತ್ತು. ಆದರೂ ಚಳಿಯ ತೀವ್ರತೆ ಅಷ್ಟಾಗಿ ಕಂಡು ಬರುತ್ತಿಲ್ಲ. ಚಂಡಮಾರುತದ ಪರಿಣಾಮದಿಂದ ನಾಳೆಯಿಂದ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಡಿ.9ರಿಂದ 12ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ.