ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟ: 4 ಸಾವು, 60 ಮಂದಿಗೆ ಗಾಯ

Prasthutha|

ಜೈಪುರ: ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ನಾಲ್ಕು ಮಂದಿ ಮೃತಪಟ್ಟಿದ್ದು, ಸುಮಾರು 60 ಮಂದಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೋಧಪುರದ ಭೂಂಗಾರ ಗ್ರಾಮದಲ್ಲಿ ನಡೆದಿದೆ.

- Advertisement -

ಗುರುವಾರ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಜೋಧ್ಪುರದಿಂದ 60 ಕಿ.ಮೀ ದೂರದಲ್ಲಿರುವ ಭುಂಗ್ರಾ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 60 ಮಂದಿಯಲ್ಲಿ 12 ಮಂದಿಯ ಸ್ಥಿತಿ ಗಂಭೀರವಾಗಿದೆ.

- Advertisement -

ವರನ ಮನೆಯಿಂದ ಮದುವೆ ಮಂಟಪದೆಡೆಗೆ ಮೆರವಣಿಗೆ ಹೊರಡಬೇಕಿದ್ದ ಸ್ವಲ್ಪ ಹೊತ್ತಿಗೂ ಮೊದಲೇ ಸಿಲಿಂಡರ್ ಸ್ಫೋಟಗೊಂಡು ಐವರು ಅತಿಥಿಗಳು ಸಾವನ್ನಪ್ಪಿ 60 ಮಂದಿ ಗಾಯಗೊಂಡಿದ್ದಾರೆ

ಮದುವೆ ಊಟವನ್ನು ಸಿದ್ಧಪಡಿಸಲು ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಮದುವೆ ಮನೆಯ ಒಂದು ಭಾಗ ಕುಸಿದು ಬಿದ್ದಿದೆ. ಘಟನೆಯಲ್ಲಿ 12 ಜನರ ಸ್ಥಿತಿ ಗಂಭೀರವಾಗಿದೆ.

ಇಬ್ಬರು ಮಕ್ಕಳಾದ ರತನ್ ಸಿಂಗ್ (5) ಮತ್ತು ಖುಷ್ಬೂ (4) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಲ್ಲಾ ಗಾಯಾಳುಗಳನ್ನು ಎಂಜಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ.

Join Whatsapp