ಕರ್ನಾಟಕದ ಚುನಾವಣೆ ಗೆಲ್ಲಲು ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡಲಾಗುತ್ತಿದೆ: ಉದ್ಧವ್‌ ಠಾಕ್ರೆ

Prasthutha|

ಮುಂಬೈ: ಕರ್ನಾಟಕ ಚುನಾವಣೆಗಾಗಿ ಬಿಜೆಪಿ, ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡುತ್ತಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಗಂಭೀರ ಆರೋಪ ಮಾಡಿದ್ದಾರೆ.

- Advertisement -


ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ, ತಮ್ಮ ಪಕ್ಷದ ಮುಖವಾಣಿ ‘ಸಾಮ್ನಾ‘ದ ಸಂಪಾದಕೀಯದಲ್ಲಿ ಬರೆದಿರುವ ಅವರು, ಮಹಾರಾಷ್ಟ್ರದ ಅಭಿವೃದ್ಧಿ ಯೋಜನೆಗಳನ್ನೆಲ್ಲಾ ಕಸಿದು ಗುಜರಾತ್‌ಗೆ ಕೊಟ್ಟಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದ ವೇಳೆಯಲ್ಲಿ ಗುಜರಾತ್‌’ನ ಸ್ಥಿತಿಗತಿ ಹಾಗೂ ಮೊರ್ಬಿ ಸೇತುವೆ ದುರಂತದ ಹೊರತಾಗಿಯೂ ಈ ಫಲಿತಾಂಶ ಬಂದಿರುವುದು ಅಚ್ಚರಿಯೇನಲ್ಲ ಎಂದು ಅವರು ಹೇಳಿದ್ದಾರೆ.


ಹಲವು ಬೃಹತ್‌ ಅಭಿವೃದ್ಧಿ ಯೋಜನೆಗಳನ್ನು ಮಹಾರಾಷ್ಟ್ರದಿಂದ ಕಸಿದು ಗುಜರಾತ್‌’ಗೆ ತೆಗೆದುಕೊಂಡು ಹೋಗಲಾಗಿದೆ. ಮಹಾರಾಷ್ಟ್ರ ಅಭಿವೃದ್ಧಿ ಯೋಜನೆಗಳು ಗುಜರಾತ್‌’ಗೆ ಹೋಗಿದ್ದು ಕೂಡ ಬಿಜೆಪಿ ಗೆಲುವಿನಲ್ಲಿ ಪಾತ್ರ ವಹಿಸಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಯೋಜನೆಗಳನ್ನು ಗುಜರಾತ್‌’ಗೆ ಮಾರಾಟ ಮಾಡಿದರು. ಈಗ ಕರ್ನಾಟಕ ಚುನಾವಣೆ ಗೆಲ್ಲಲು ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



Join Whatsapp