ಡಿ.ಕೆ.ಶಿವಕುಮಾರ್’ರನ್ನು ಭೇಟಿಯಾದ ಎಚ್. ವಿಶ್ವನಾಥ್

Prasthutha|

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್. ಆರ್. ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

- Advertisement -

ಇತ್ತೀಚೆಗಷ್ಟೇ ವಿಶ್ವನಾಥ್ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಬಗ್ಗೆ ವದಂತಿ ಹಬ್ಬಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ವಿಶ್ವನಾಥ್, ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ತಕ್ಷಣ ಆ ಪಕ್ಷ ಸೇರುತ್ತೇನೆ ಎಂದಲ್ಲ ಎಂದು ಸಮಜಾಯಿಷಿ ನೀಡಿದ್ದರು.

Join Whatsapp