ಗಾಂಧಿನಗರ: ಭೂಪೇಂದ್ರ ಪಟೇಲ್ ಎರಡನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ಹೇಳಿದೆ.
ಪಕ್ಷದ ರಾಜ್ಯ ಪ್ರಧಾನ ಕಚೇರಿ ‘ಕಮಲಂ’ನಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ನಡೆದ ಸಭೆಯಲ್ಲಿ, ಭೂಪೇಂದ್ರ ಪಟೇಲ್ ಅವರನ್ನು ಗುಜರಾತ್ ಮುಖ್ಯಮಂತ್ರಿಯಾಗಿ ನೇಮಿಸುವ ಪ್ರಸ್ತಾಪವನ್ನು ಸರ್ವಾನುಮತದಿಂದ ಅನುಮೋದಿಸಲಾಯಿತು.
ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಬಿ.ಎಸ್.ಯಡಿಯೂರಪ್ಪ ಮತ್ತು ಅರ್ಜುನ್ ಮುಂಡಾ ಅವರು ಪಕ್ಷದ ಕೇಂದ್ರ ವೀಕ್ಷಕರಾಗಿ ಸಭೆಯಲ್ಲಿ ಹಾಜರಿದ್ದರು.
ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು ದಾಖಲಿಸಿದ ನಂತರ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲು 60 ವರ್ಷದ ಪಟೇಲ್ ಅವರು ಶುಕ್ರವಾರ ತಮ್ಮ ಇಡೀ ಸಚಿವ ಸಂಪುಟದೊಂದಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.