ಬೀದರ್: ಈಜಲು ಹೋದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಕಾರಂಜಾ ಜಲಾಶಯದ ಕಾಲುವೆಯಲ್ಲಿ ನಡೆದಿದೆ.
ತೂಗಾಂವ್ ಗ್ರಾಮದ ಬಸವರಾಜ (16) ಹಾಗೂ ಕಣಜಿ ಗ್ರಾಮದ ಸಾಯಿನಾಥ (17) ಮೃತಪಟ್ಟ ಬಾಲಕರು. ಸಮೀಪದ ಕಾರಂಜಾ ಜಲಾಶಯದ ಬಲದಂಡೆ ಕಾಲುವೆಗೆ ಗೆಳೆಯರೊಂದಿಗೆ ಈಜಾಡಲು ಹೋಗಿದ್ದ ವೇಳೆ ನೀರಿನ ರಭಸಕ್ಕೆ ಸಿಲುಕಿ ಇಬ್ಬರು ಬಾಲಕರು ಕೊಚ್ಚಿಕೊಂಡು ಹೋಗಿದ್ದಾರೆ.
ಮೃತ ವಿದ್ಯಾರ್ಥಿಗಳಿಬ್ಬರೂ ಹಳ್ಳಿಖೇಡ್ ಗ್ರಾಮದ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದರು. ಸ್ಥಳಕ್ಕೆ ಗ್ರಾಮೀಣ ಠಾಣೆ ಸಿಪಿಐ ವೀರಣ್ಣ ದೊಡ್ಡಮನಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಬಗ್ಗೆ ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.