ಬೆಂಗಳೂರು: ರಾಜ್ಯದಲ್ಲಿ 10 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಲಿದ್ದಾರೆ. ಅವರ ಲಿಸ್ಟ್ ನಾನು ಮಾತನಾಡಿರುವವರ ಬಳಿ ಇದೆ. ಪಕ್ಷ ಸೇರ್ಪಡೆಯಾದಾಗ ಈ ಬಗ್ಗೆ ಗೊತ್ತಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್’ನ ಬೀದಿ ಜಗಳ ಬೆಂಗಳೂರಿನಲ್ಲಿ ಪರಿಹಾರವಾಗಲ್ಲ ಎಂದು ದೆಹಲಿಗೆ ಶಿಫ್ಟ್ ಆಗಿದೆ. ಡಿಕೆಶಿ, ಸಿದ್ದರಾಮಯ್ಯ ಬೀದಿ ಜಗಳ ಮಾಡುತ್ತಿದ್ದರು. ಇಬ್ಬರನ್ನು ಕಾಂಪ್ರಮೈಸ್ ಮಾಡಲು ಖರ್ಗೆ ದೆಹಲಿಗೆ ಕರೆದಿದ್ದಾರೆ ಎಂದು ತಿಳಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತದಲ್ಲಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.