ಅತೀ ವೇಗದ ಚಾಲನೆ; ಸೇತುವೆಗೆ ಡಿಕ್ಕಿ ಹೊಡೆದ ಕಾರು, ಮೂವರು ದಾರುಣ ಸಾವು

Prasthutha|

ತುಮಕೂರು: ಅತೀ ವೇಗವಾಗಿ ಬಂದ ಕಾರೊಂದು ಚಾಲನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದು ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿಯ ಕಳ್ಳಂಬೆಳ್ಳ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

- Advertisement -


ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಯಾವ ಕಂಪನಿಯ ಕಾರು ಎಂಬುದು ಕೂಡ ಪತ್ತೆ ಮಾಡಲು ಅಸಾಧ್ಯವಾದಷ್ಟು ಭೀಕರವಾಗಿ ಅವಘಡ ಸಂಭವಿಸಿದೆ.


ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಸಿಂಧನೂರಿನಿಂದ ಬೆಂಗಳೂರಿಗೆ ಬರುವ ವೇಳೆ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಚಾಲಕ ಸೇರಿ ಐದು ಮಂದಿ ಪ್ರಯಾಣಿಸುತ್ತಿದ್ದು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬರ ಆಸ್ಪತ್ರೆಗೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮತ್ತಿಬ್ಬರ ಪರಿಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -


ಕಳ್ಳಂಬೆಳ್ಳ ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.



Join Whatsapp