ಮುಲ್ಕಿ ಹಲ್ಲೆ ಪ್ರಕರಣ| ಎರಡು FIR ದಾಖಲು

Prasthutha|

ಮಂಗಳೂರು: ಮುಲ್ಕಿಯಲ್ಲಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಯುವಕನೊಬ್ಬನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು FIR ದಾಖಲಾಗಿದೆ.

- Advertisement -

ಬಾಲಕಿಯೊಬ್ಬಳನ್ನು ಬೈಕಿನಲ್ಲಿ ಹಿಂಬಾಲಿಸಿ, ಆಕೆಯ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇರೆಗೆ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಲಾಗಿತ್ತು.

ಬಾಲಕಿಯ ಪೋಷಕರು ಆರೋಪಿ ವಿರುದ್ಧ ಮೂಲ್ಕಿ ಠಾಣೆಗೆ ದೂರು ನೀಡಿದ್ದು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

- Advertisement -

ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಕುರಿತೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಬಾಲಕಿಯನ್ನು ಹಿಂಬಾಲಿಸಿ ಅನುಚಿತವಾಗಿ ವರ್ತಿಸಿದ ಕುರಿತು ಯುವಕನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಬಗ್ಗೆಯೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.



Join Whatsapp