ಭಾರತಕ್ಕೆ ಅಣ್ವಸ್ತ್ರ ಬೆದರಿಕೆ ಹಾಕಿದ ಪಾಕ್‌ ಸಚಿವೆ

Prasthutha|

- Advertisement -

ನವದೆಹಲಿ: ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಅನಾಗರಿಕ
ಹೇಳಿಕೆ ಬೆನ್ನಲ್ಲೇ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ನಾಯಕಿ ಶಾಜಿಯಾ ಮಾರಿ ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಶಾಜಿಯಾ ಮಾರಿ ಪ್ರತಿಕ್ರಿಯಿಸಿ, ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ ಎಂಬುದನ್ನು ಭಾರತ ಮರೆಯಬಾರದು. ನಮ್ಮ ಪರಮಾಣು ಸ್ಥಿತಿಯು ಮೌನವಾಗಿರಲು ಉದ್ದೇಶಿಸಿಲ್ಲ. ಅಗತ್ಯ ಬಿದ್ದರೆ ನಾವು ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ.



Join Whatsapp