ಆಗ್ರಾ : ಕಾರೊಂದು ಕಂಟೈನರ್ ಗೆ ಢಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡದಿದೆ.
ಆಗ್ರಾದ ಯಮುನಾ ಎಕ್ಸ್ ಪ್ರೆಸ್ ಹೈವೆಯಲ್ಲಿ ಉತ್ತರ ಪ್ರದೇಶದಿಂದ ದೆಹಲಿಯ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ನಾಗಾಲ್ಯಾಂಡ್ ನೋಂದಣಿ ಸಂಖ್ಯೆಯುಳ್ಳ ಕಂಟೈನರ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡಿದೆ. ಘಟನೆಯಲ್ಲಿ ಚಾಲಕ ಸಮೇತ ಐವರು ಸಜೀವ ದಹನವಾಗಿದ್ದಾರೆ.
ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ವರದಿಗಳು ತಿಳಿಸಿವೆ.