ಬೆಟ್ಟ ಕುರುಬ ಜನಾಂಗಕ್ಕೆ ಎಸ್ ಟಿ ಸ್ಥಾನಮಾನ| ಲೋಕಸಭೆಯಲ್ಲಿ ಮಸೂದೆ ಅಂಗೀಕಾರ

Prasthutha|

ಬೆಂಗಳೂರು: ಕರ್ನಾಟಕ ಮೂಲದ ‘ಬೆಟ್ಟ-ಕುರುಬ’ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಮಸೂದೆಯನ್ನು ಲೋಕಸಭೆ ಶುಕ್ರವಾರ ಅಂಗೀಕರಿಸಿದೆ.

- Advertisement -

ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಬೆಟ್ಟ-ಕುರುಬ ಸಮುದಾಯದ ಜನರು ತಮ್ಮನ್ನು ‘ಕಾಡು ಕುರುಬ’ ಸಮುದಾಯದ ಜೊತೆಗೆ ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದರು.

ಡಿಸೆಂಬರ್ 9ರಂದು ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಲಾಗಿತ್ತು. ಮಸೂದೆಯನ್ನು ರಾಜ್ಯಸಭೆಯು ಅಂಗೀಕರಿಸಿದ ನಂತರ ಮತ್ತು ನಿಯಮಗಳನ್ನು ರೂಪಿಸಿದ ಬಳಿಕ ಬೆಟ್ಟ-ಕುರುಬ ಸಮುದಾಯದ ಸದಸ್ಯರು ಪರಿಶಿಷ್ಟ ಪಂಗಡದ ಸದಸ್ಯರಿಗೆ ಒದಗಿಸುವ ಎಲ್ಲಾ ಪ್ರಯೋಜನಗಳಿಗೆ ಅರ್ಹರಾಗುತ್ತಾರೆ, ವಿಶೇಷವಾಗಿ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಸಿಗಲಿದೆ.

- Advertisement -

ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ವಿರೋಧ ಪಕ್ಷಗಳ ಹಲವು ಸದಸ್ಯರು, ಸಮುದಾಯಗಳನ್ನು ಎಸ್‌ಟಿ ಪಟ್ಟಿಗೆ ಸೇರಿಸಿದರೆ ಮಾತ್ರ ಸಾಲದು ಅವರಿಗಾಗಿ ಸರ್ಕಾರ ಕಲ್ಯಾಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.



Join Whatsapp