ಮುಂಬೈ: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಸೂಚನೆ ನೀಡಿದ ಪೊಲೀಸ್ ಕಾನ್ಸ್’ಟೇಬಲ್’ಗೆ ಚೂರಿಯಿಂದ ಇರಿದ ಘಟನೆ ಮುಂಬೈನ ಕಂಡಿವಲಿ ಪ್ರದೇಶದಲ್ಲಿ ನಡೆದಿದೆ.
ಘಟನೆಯಲ್ಲಿ ಪೇದೆಯ ಕೈಗೆ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಾಮಗೊಂಟೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಜನ ಸಂಚಾರವಿರುವ ಪ್ರದೇಶದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ರಾಮಗೊಂಟೆಯೊಂದಿಗೆ ಮೂತ್ರ ವಿಸರ್ಜನೆ ಮಾಡದಂತೆ ಕಾನ್ಸ್’ಟೆಬಲ್ ಸೂಚಿಸಿದ್ದಾರೆ.
ಈ ವೇಳೆ ಕೋಪಗೊಂಡ ಆರೋಪಿ ಪೇದೆ ಜೊತೆ ವಾಗ್ವಾದ ನಡೆಸಿದ್ದು, ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.