ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗಾಗಿ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಳಗಾವಿ: ಮುಂದಿನ ಶೈಕ್ಷಣಿಕ ವರ್ಷದಿಂದ  ಹೆಣ್ಣುಮಕ್ಕಳಿಗೆ ಯೋಗದೊಂದಿಗೆ ಆತ್ಮರಕ್ಷಣೆಗಾಗಿ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಪ್ರದರ್ಶನ ವೀಕ್ಷಿಸಿ ಮಾತನಾಡಿದ ಅವರು, ಎಲ್ಲಾ ಶಿಕ್ಷಣ ಸಂಸ್ಥೆಗಳು ಆತ್ಮರಕ್ಷಣೆ ಕುರಿತ ಅಲ್ಪಾವಧಿ ಕೋರ್ಸುಗಳನ್ನು ಕಲಿಸುವ ಅವಶ್ಯಕತೆ ಇದೆ.  ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ  ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳನ್ನು ಕೂಡ ಪಿಯುಸಿ ಹಂತದಿಂತ ತರಬೇತಿ ನೀಡುವುದು ಸೂಕ್ತ. ಅದರ ಬಗ್ಗೆ  ಒಂದು ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದರು.

ಸರ್ಕಾರ ಈ ಕಾರ್ಯಕ್ರಮ ವಿಸ್ತರಿಸಿ ಹೆಣ್ಣುಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿದೆ. ನಿರ್ಭಯ ಯೋಜನೆಯನ್ನು 700 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಇದನ್ನು ಎಲ್ಲಾ ನಗರಗಳಲ್ಲಿ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ.ಈ ನಿಟ್ಟಿನಲ್ಲಿ ಎಲ್ಲಾ  ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.



Join Whatsapp